Mysore
22
light rain

Social Media

ಗುರುವಾರ, 08 ಅಕ್ಟೋಬರ್ 2026
Light
Dark

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ

ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇದನ್ನು ಖಂಡಿಸಿ ಯುವ ಜನತೆ ಬೃಹತ್‌ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.

ಈ ಬೆಳವಣಿಗೆ ಬೆನ್ನಲ್ಲೇ ಅಲ್ಲಿನ ಸರ್ಕಾರ ಸೋಷಿಯಲ್‌ ಮೀಡಿಯಾ ಮೇಲಿನ ನಿಷೇಧ ಆದೇಶ ಹಿಂಪಡೆದಿತ್ತು. ಆದಾದ್ಯೂ ಕೂಡ ನೇಪಾಳ ಸರ್ಕಾರದ ವಿರುದ್ಧ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ಹಿಂಸಾಚಾರ ಮುಂದುವರಿದಿತ್ತು.

ಇಂದು ನಡೆದ ಪ್ರತಿಭಟನೆ ವೇಳೆ ಪ್ರಧಾನಿ ಕೆ.ಪಿ.ಶರ್ಮಾ ಓಲಿ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂಚಾಚಾರ ಭುಗಿಲೆದ್ದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

Tags:
error: Content is protected !!