Mysore
18
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮದ್ದೂರು ಪ್ರಕರಣ : ASP ತಿಮ್ಮಯ್ಯ ವರ್ಗಾವಣೆ

ಮಂಡ್ಯ : ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಅಡಿಷನಲ್ ಎಸ್‌ಪಿ-1) ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತಿಮ್ಮಯ್ಯ ಅವರ ಸ್ಥಾನಕ್ಕೆ ಬಳ್ಳಾರಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಗೃಹ ಇಲಾಖೆ ವರ್ಗಾವಣೆ ಮಾಡಿ ಇನ್ನೂ ತಿಮ್ಮಯ್ಯ ಅವರಿಗೆ ಜಾಗ ತೋರಿಸಿಲ್ಲ. ನವೀನ್ ಕುಮಾರ್ ಅವರು ತಕ್ಷಣವೇ ಮಂಡ್ಯ ಜಿಲ್ಲೆಯ ಹೆಚ್ಚುವರಿ ಎಸ್‌ಪಿ-1 ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇದನ್ನು ಓದಿ: ಶ್ರೀರಂಗಪಟ್ಟಣ-ಕುಶಾಲನಗರ ಹೆದ್ದಾರಿಯ ಎರಡೂ ಕಡೆ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ

ಮದ್ದೂರು ಪ್ರಕರಣದಲ್ಲಿ ತಿಮ್ಮಯ್ಯಗೆ ಹೆಚ್ಚುವರಿ ಜವಾಬ್ದಾರಿ ನೀಡಿರಲಿಲ್ಲ. ಆದರೂ ಎಎಸ್ಪಿ ತಿಮ್ಮಯ್ಯ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಕಲ್ಲು ತೂರಾಟ ತಡೆಯಬೇಕಿದ್ದು ಮದ್ದೂರು ಇನ್‌ಸ್ಪೆಕ್ಟರ್‌ ಹಾಗೂ ಇತರ ಪೊಲೀಸರ ಕರ್ತವ್ಯವಾಗಿತ್ತು.

ಸೋಮವಾರ ಪ್ರತಿಭಟನೆ ಬಂದೋಬಸ್ತ್ ನೇತೃತ್ವ ವಹಿಸಿದ್ದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ. ಕೇವಲ ಸ್ಥಳದಲ್ಲಿ ಬಂದೋಬಸ್ತ್ ಕೆಲಸ ಮಾಡುತ್ತಿದ್ದ ತಿಮ್ಮಯ್ಯ. ಅಮಾಯಕ ಅಧಿಕಾರಿಯನ್ನು ಬಲಿಪಶು ಮಾಡಿದ ರಾಜ್ಯ ಸರ್ಕಾರ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ದೋಷಣೆ ಕೇಳಿಬರುತ್ತಿದೆ.

Tags:
error: Content is protected !!