Mysore
27
clear sky

Social Media

ಶನಿವಾರ, 31 ಜನವರಿ 2026
Light
Dark

ಮಂಡ್ಯ | ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡಲ್ಲ : ಸಚಿವ ಚಲುವರಾಯಸ್ವಾಮಿ

chaluvarayaswami

ಮಂಡ್ಯ : ಜಿಲ್ಲೆಯಲ್ಲಿ ಅಶಾಂತಿ ಮೂಡಿಸಲು ಬಿಡುವುದಿಲ್ಲ. ಬಿ.ಜೆ.ಪಿ.-ಜಾ.ದಳ ಸೇರಿದಂತೆ ಯಾವುದೇ ಪಕ್ಷವಾಗಲಿ ಜಿಲ್ಲೆಯಲ್ಲಿ ಅಶಾಂತಿ ನಡೆಸಲು ನಾನು ಬಿಡುವುದಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಖಡಕ್ಕಾಗಿ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಮದ್ದೂರಿನಲ್ಲಿ ಪರಿಸ್ಥಿತಿ ಹತೋಟಿಯಲ್ಲಿದೆ. ಮದ್ದೂರಿನಲ್ಲಿ ನಡೆದಂತಹ ಗಲಭೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಗುರುವಾರ ಮಳವಳ್ಳಿಯಲ್ಲೂ ಕೂಡ ಬಂದ್ ನಡೆದಿದೆ. ಅಲ್ಲೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲಾಗಿತ್ತು ಎಂದರು.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇನ್ನು ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಮದ್ದೂರಿನಲ್ಲಿ ಕಲ್ಲು ತೂರಾಟ ನಡೆಸಿದ ೨೨ ಜನರ ಮೇಲೆ ಎಫ್‌ಐ ಆರ್ ದಾಖಲಿಸಲಾಗಿದೆ. ಅದರ ಹಿಂದೆ ನಡೆದಿರುವ ಘಟನೆಗಳ ಕುರಿತು ತನಿಖೆಯ ನಂತರ ತಿಳಿಸಲಾಗುವುದು. ನಾಗಮಂಗಲ ಗಲಭೆಯಲ್ಲೂ ಕೂಡ ಸಂಬಂಧಪಟ್ಟವರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಸ್ತುತ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ಯಾವುದೇ ಓಲೈಕೆ ಪ್ರಶ್ನೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:
error: Content is protected !!