Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ರಾಜ್ಯದ ಗಲಾಟೆಗಳಿಗೆ ಸಿದ್ದರಾಮಯ್ಯ ಅಹಂಕಾರವೇ ಕಾರಣ: ಶೋಭಾ ಕರಂದ್ಲಾಜೆ

ಶಿವಮೊಗ್ಗ: ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನು ಓದಿ ; ಭಾರತ-ಪಾಕಿಸ್ತಾನ ಕ್ರಿಕೆಟ್‌ ರದ್ದು ಮಾಡಬೇಕಿತ್ತು: ಸಂಸದ ಬಸವರಾಜ ಬೊಮ್ಮಾಯಿ

ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣಿಸುತ್ತಿಲ್ಲ. ಕೇರಳದ ಆನೆಯಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಮದ್ದೂರಿನಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಮಾಡಲಾಗಿದೆ. ಆದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಅಂದರೆ ಅದಕ್ಕೆ ಸಿಎಂ ಸಿದ್ದರಾಮಯ್ಯ ಅಹಂಕಾರವೇ ಕಾರಣ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!