ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್.21ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್.21ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಹುಲಿಗಳ ಸಂರಕ್ಷಣೆ; ಆದಿವಾಸಿಗಳ ಹಿತರಕ್ಷಣೆ ನಡುವೆ ಇರಲಿ ಸಮನ್ವಯ
ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





