Mysore
17
few clouds

Social Media

ಬುಧವಾರ, 21 ಜನವರಿ 2026
Light
Dark

ಮೈಸೂರು ಮುಡಾ ಹಗರಣ: ಮಾಜಿ ಆಯುಕ್ತ ದಿನೇಶ್‌ ವಿರುದ್ಧ ತನಿಖೆಗೆ ಅಸ್ತು

ಮೈಸೂರು: ಅಕ್ರಮ ಸೈಟ್‌ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ.

ಮೈಸೂರು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಹಾಗೂ ದಿನೇಶ್‌ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್‌ ಅನುಮತಿ ಕೋರಿದ್ದರು.

ದಿನೇಶ್‌ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್‌ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಇದನ್ನು ಓದಿ : ಆನ್‌ಲೈನ್‌ ಬೆಟ್ಟಿಂಗ್‌ ಆಪ್:‌ ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪಗೆ ಇಡಿ ಸಮನ್ಸ್‌

ಇನ್ನು ಸಿಎಂ ಸಿದ್ದರಾಮಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆ ತಡವಾಗಿದ್ದಕ್ಕೆ ಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿದೆ. ಕಳೆದ ಆರು ತಿಂಗಳಿನಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಚಾಟಿ ಬೀಸಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶ ನೀಡಿ ಎಂದು ಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

ಈ ವೇಳೆ ಎಚ್.ವಿ.ರಾಜೀವ್‌ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದು, ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.‌29ಕ್ಕೆ ಮುಂದೂಡಿಕೆ ಮಾಡಿದೆ.

Tags:
error: Content is protected !!