Mysore
28
clear sky

Social Media

ಗುರುವಾರ, 29 ಜನವರಿ 2026
Light
Dark

ಅಕ್ಟೋಬರ್.‌9ರಿಂದ ಹಾಸನಾಂಬ ಜಾತ್ರಾ ಮಹೋತ್ಸವ

ಬೆಂಗಳೂರು: ಮುಂದಿನ ತಿಂಗಳ ಅಕ್ಟೋಬರ್.‌9ರಿಂದ ಹಾಸನದ ಅಧಿದೇವತೆ ಹಾಸನಾಂಬ ಜಾತ್ರಾ ಮಹೋತ್ಸವ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಡಳಿತದ ವತಿಯಿಂದ ಸಿಎಂ ಸಿದ್ದರಾಮಯ್ಯರಿಗೆ ಆಹ್ವಾನ ನೀಡಲಾಯಿತು.

ಇಂದು ಶಾಸಕ ಶಿವಲಿಂಗೇಗೌಡ, ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್‌ ಸುಜೀತಾ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಆಹ್ವಾನ ನೀಡಿದರು.

ಇನ್ನು ಹಾಸನಾಂಬೆ ಜಾತ್ರಾ ಮಹೋತ್ಸವವು ಅಕ್ಟೋಬರ್.‌9ರಿಂದ 23ರವರೆಗೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದೆ.

ಇದನ್ನು ಓದಿ: ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ: ರೈತರಿಗೆ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಿಷ್ಟು.!

ಇನ್ನು ಈ ಬಾರಿ ಹಾಸನಾಂಬ ಭಕ್ತರಿಗೆ ಮಹತ್ವದ ಪ್ರಕಟಣೆ ಹೊರಡಿಸಲಾಗಿದ್ದು, ದೇವಾಲಯದ ಆವರಣದಲ್ಲಿ ಪಾದರಕ್ಷೆ ಬಿಡುವುದನ್ನು ನಿಷೇಧಿಸಲಾಗಿದೆ.

ಖಾಸಗಿ ವಾಹನದಲ್ಲಿ ಬರುವವರು ವಾಹನದಲ್ಲಿಯೇ ಪಾದರಕ್ಷೆಗಳನ್ನು ಬಿಟ್ಟು ಬರಬೇಕು. ಪಾರ್ಕಿಂಗ್‌ ಸ್ಥಳಗಳಲ್ಲಿ ಬಿಡಬಹುದು. ಬಸ್‌ ನಿಲ್ದಾಣದಲ್ಲಿ ಹಾಗೂ ರೈಲ್ವೆ ಸ್ಟೇಷನ್‌ನಲ್ಲಿ ವಿಶೇಷ ಪಾದರಕ್ಷೆ ಸ್ಟ್ಯಾಂಡ್‌ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

Tags:
error: Content is protected !!