ದುನಿಯಾ ವಿಜಯ್ ಮತ್ತು ಕೆ. ಮಂಜು ಮಗ ಶ್ರೇಯಸ್ ಮಂಜು ಅಭಿನಯದಲ್ಲಿ ಎಸ್. ನಾರಾಯಣ್ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಅದಕ್ಕೆ ಉತ್ತರ ಸಿಕ್ಕಿದ್ದು, ಚಿತ್ರವು ಅಕ್ಟೋಬರ್.31ರಂದು ಚಿತ್ರ ಬಿಡುಗಡೆಯಾಗಲಿದೆ.
ಹೌದು, ಅ.31ರಂದು ಚಿತ್ರ ಬಿಡುಗಡೆಯಾಗಲಿದೆ. ಕಳೆದ ವರ್ಷ ಬಿಡುಗಡೆಯಾದ ‘ಭೀಮ’ ಚಿತ್ರದ ನಂತರ ದುನಿಯಾ ವಿಜಯ್ ಅಭಿನಯದ ಯಾವೊಂದು ಚಿತ್ರ ಬಿಡುಗಡೆಯಾಗಿರಲಿಲ್ಲ. ಈ ವರ್ಷ ‘ಲ್ಯಾಂಡ್ ಲಾರ್ಡ್’ ಬಿಡುಗಡೆಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದವರಿಗೆ, ಅದಕ್ಕೂ ಮೊದಲು ‘ಮಾರುತ’ ಬಿಡುಗಡೆಯಾಗಲಿದೆ.
ಇದನ್ನು ಓದಿ : ಪಾಕ್ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಮಾತಾಡಲಿ: ಸಚಿವ ಸಂತೋಷ್ ಲಾಡ್
ಈ ಚಿತ್ರದಲ್ಲೊಂದು ಗಂಭೀರ ಸಂದೇಶವನ್ನು ನಾರಾಯಣ್ ಹೇಳಿದ್ದಾರಂತೆ. ಪೋಷಕರೆ, ನಿಮ್ಮ ಮಕ್ಕಳ ಚಲನವಲನದ ಬಗ್ಗೆ ನಿಮಗೆ ತಿಳಿದಿರಲಿ, ಅವರ ಕೈಯಲ್ಲಿರುವ ಮೊಬೈಲ್ ಚಟುವಟಿಕೆಗಳ ಬಗ್ಗೆ ನಿಮಗೆ ತಿಳಿದಿರಲಿ, ನೀವು ಎಷ್ಟೇ ಬ್ಯುಸಿಯಿದರೂ ವಾರಕ್ಕೊಮ್ಮೆಯಾದರೂ ಸಮಯ ಬಿಡುವು ಮಾಡಿಕೊಂಡು ಅವರ ಜೊತೆ ಸಮಯ ಕಳೆಯಿರಿ ಎಂದು ಈ ಚಿತ್ರದಲ್ಲಿ ಹೇಳಿದ್ದಾರಂತೆ. ಅದರ ಜೊತೆಗೆ ದೇಶ ಎದುರಿಸುತ್ತಿರುವ ಗಂಭೀರ ಸಮಸ್ಯೆಯನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ ಎಂದು ನಾರಾಯಣ್ ಹಾಡು ಬಿಡುಗಡೆಯ ಸಂದರ್ಭದಲ್ಲಿ ಹೇಳಿಕೊಂಡಿದ್ದರು.
‘ಮಾರುತ’ ಚಿತ್ರವನ್ನು ಈಶಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ. ಮಂಜು ಮತ್ತು ರಮೇಶ್ ಯಾದವ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ವಿಜಯ್ ಮತ್ತು ಶ್ರೇಯಸ್ ಜೊತೆಗೆ ಬೃಂದಾ ಆಚಾರ್ಯ, ತಾರಾ, ಸಾಧು ಕೋಕಿಲ, ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಶರತ್ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ರವಿಚಂದ್ರನ್ ಸಹ ಇದ್ದಾರಂತೆ. ಪಿ.ಕೆ.ಎಚ್. ದಾಸ್ ಛಾಯಾಗ್ರಹಣ ಈ ಚಿತ್ರಕ್ಕಿದೆ.





