ಹೊಸದಿಲ್ಲಿ : ವಾಟರ್ ಸ್ಪೋರ್ಟ್ಸ್, ಜಲವಿಮಾನಯಾನ ಕ್ರೀಡೆಯನ್ನು ಕೆಆರ್‌ಎಸ್ ಹಿನ್ನೀರಿನಲ್ಲಿ ಆಯೋಜಿಸಲು ಅನುಮೋದನೆ ನೀಡುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿರುವ ಕುಮಾರಸ್ವಾಮಿ ಅವರು, ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ವಿಮಾನಯಾನ ಕ್ರೀಡೆಗಳನ್ನು ಆಯೋಜಿಸಲು ಅನುಮೋದನೆ ಕೋರಿ ಮನವಿ ಪತ್ರ ಸಲ್ಲಿಸಿದ್ದೇನೆ ಎಂದಿದ್ದಾರೆ.
ವಾಟರ್ ಸ್ಪೋರ್ಟ್, ಜಲವಿಮಾನಯಾನ ಕ್ರೀಡಗಳು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದ್ದಾರೆ.
ಜೊತೆಗೆ ಕರ್ನಾಟಕಕ್ಕೆ ಸಂಬಂಧಿಸಿದ ವಿಮಾನಯಾನ ಯೋಜನೆಗಳ ಕುರಿತು ಚರ್ಚೆ ಸೇರಿದಂತೆ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ಯೋಜನೆಯ ಪ್ರಗತಿಯ ಬಗ್ಗೆಯೂ ನಾಯ್ಡು ಅವರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.





