Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಭಾರತ ನಡೆಸಿದ ದಾಳಿಯಲ್ಲಿ ಮಸೂದ್‌ ಅಜರ್‌ ಕುಟುಂಬ ಛಿದ್ರ : ಉಗ್ರ ಇಲ್ಯಾಸ್‌ ಕಾಶ್ಮೀರಿ

pakisthan

ಹೊಸದಿಲ್ಲಿ : ಪಾಕಿಸ್ತಾನದ ಬಹಾವಲ್ಪುರದಲ್ಲಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಅವರ ಕುಟುಂಬದ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್ ಮಸೂದ್ ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾರೆ.

ಭಾರೀ ಶಸ್ತ್ರಸಜ್ಜಿತ ಪಾಕಿಸ್ತಾನಿ ಸೇನಾ ಸಿಬ್ಬಂದಿಯಿಂದ ಸುತ್ತುವರೆದಿರುವ ಮಸೂದ್ ಇಲ್ಯಾಸ್ ಕಾಶ್ಮೀರಿ ವೀರಾವೇಶದಿಂದ ಭಾರತದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ವಿಡಿಯೋ ವೈರಲ್ ಆಗಿದೆ. ಮೇ 7ರಂದು ನಡೆದ ಆಪರೇಷನ್ ಸಿಂಧೂರ್ ದಾಳಿಯ ಸಮಯದಲ್ಲಿ ಅಜರ್ ಅವರ ಕುಟುಂಬವನ್ನು “ತುಂಡುಗಳಾಗಿ ಪೀಸ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆ ಮೊದಲ ಬಾರಿಗೆ ತನ್ನ ಮುಖ್ಯಸ್ಥ ಮಸೂದ್ ಅಜರ್ ಕುಟುಂಬದ ಸದಸ್ಯರು ಭಾರತದ ಆಪರೇಷನ್ ಸಿಂಧೂರ್‌ನ ಭಾಗವಾಗಿ ಬಹವಾಲ್ಪುರದಲ್ಲಿ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಒಪ್ಪಿಕೊಂಡಿದೆ. ಎಲ್ಲವನ್ನೂ ತ್ಯಾಗ ಮಾಡಿದ ನಂತರ ಮೇ 7ರಂದು ಬಹಾವಲ್ಪುರದಲ್ಲಿ ಭಾರತೀಯ ಪಡೆಗಳು ಮೌಲಾನಾ ಮಸೂದ್ ಅಜರ್ ಅವರ ಕುಟುಂಬವನ್ನು ಛಿದ್ರಗೊಳಿಸಿದವು ಎಂದು ಕಾಶ್ಮೀರಿ ಹೇಳಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಇದರಲ್ಲಿ 25 ಪ್ರವಾಸಿಗರು ಸಾವನ್ನಪ್ಪಿದರು, ಓರ್ವ ಸ್ಥಳೀಯ ಕೂಡ ಸಾವನ್ನಪ್ಪಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಾದ್ಯಂತ 9 ಭಯೋತ್ಪಾದಕ ಶಿಬಿರಗಳ ಮೇಲೆ ಸಂಘಟಿತ ದಾಳಿಗಳನ್ನು ನಡೆಸಿತು. ಲಾಹೋರ್‌ನಿಂದ 400 ಕಿ.ಮೀ ದೂರದಲ್ಲಿರುವ ಪಾಕಿಸ್ತಾನದ 12ನೇ ಅತಿದೊಡ್ಡ ನಗರವಾದ ಬಹಾವಲ್ಪುರದ ಮೇಲಿನ ದಾಳಿಯಲ್ಲಿ ಅಜರ್‌ನ 10 ಸಂಬಂಧಿಕರನ್ನು ಕೂಡ ಕೊಲ್ಲಲಾಯಿತು. ಇದರಲ್ಲಿ ಅವನ ಸಹೋದರಿ, ಆಕೆಯ ಪತಿ, ಅವನ ಸೋದರಳಿಯ, ಅವನ ಸೊಸೆ ಮತ್ತು ಇತರೆ ಕುಟುಂಬಸ್ಥರು ಕೂಡ ಸೇರಿದ್ದಾರೆ. ಬೆಳಗಿನ ಜಾವದ ದಾಳಿಯಲ್ಲಿ ಅಜರ್‌ನ ನಾಲ್ವರು ಸಹಾಯಕರು ಸಹ ಸಾವನ್ನಪ್ಪಿದ್ದರು.

Tags:
error: Content is protected !!