Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

ಧರ್ಮಸ್ಥಳ ಕೇಸ್‌: ಬಂಗ್ಲಗುಡ್ಡದಲ್ಲಿ ಮಹಜರಿಗೆ ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌

dharmasthala

ಮಂಗಳೂರು: ಧರ್ಮಸ್ಥಳ ಪ್ರರಕಣಕ್ಕೆ ಸಂಬಂಧಿಸಿದಂತೆ ಬಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್‌ಐಟಿಗೆ ಅರಣ್ಯ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಈ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ಡ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.

ಇದನ್ನು ಓದಿ : ಧರ್ಮಸ್ಥಳ | ಮತ್ತೆ ಉತ್ಖನನ ಚಿಂತನೆ ನಡೆಸಿದ ಎಸ್‌ಐಟಿ

ತನಿಖಾಧಿಕಾರಿ ಜೀತೇಂದ್ರ ಕುಮಾರ್‌ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಂ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ.

ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯಲಾಗುವುದಿಲ್ಲ. ಬದಲಿಗೆ ಮಹಜರು ನಡೆಯಲಿದೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Tags:
error: Content is protected !!