Mysore
26
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಬಿಜೆಪಿ ಶಾಸಕ ಶ್ರೀವತ್ಸ ವಿರುದ್ದ ಎಫ್ ಐಆರ್: ಕಾರಣ ಇಷ್ಟೇ

MLA T.S. Srivatsa said he is ready for an open debate with CM Siddaramaiah.

ಬೆಂಗಳೂರು: ಕುರುಬ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮೈಸೂರಿನ ಕೆ ಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀ ವತ್ಸ ವಿರುದ್ಧ ಬೆಂಗಳೂರಿನಲ್ಲಿ ಎಫ್ ಐ ಆರ್ ದಾಖಲಾಗಿದೆ.

ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕರು ಆಗಿರುವ ಶ್ರೀ ವರ್ತ ವಿರುದ್ಧ ಬಿಎನ್ಎಸ್ 353 ( 2) ರ ಅಡಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಕುರುಬ ಸಮಾಜದ ಮುಖಂಡ ಸಿದ್ದಣ್ಣ ತೇಜಿ ಅವರು ನೀಡಿದ್ದ ದೂರಿನ ಅನ್ವಯ ಪೊಲೀಸರು ದೂರು ದಾಖಲಿಸಿದ್ದಾರೆ.
ತಮ್ಮ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಶ್ರೀವಾಸ್ತ ವಿರುದ್ಧ ದೂರು ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು
ಸಿದ್ದಣ್ಣ ತೇಜಿ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎ. ಸಲೀಂ ಅವರಿಗೆ ದೂರು ನೀಡಲಾಗಿತ್ತು.
ಅದರ ಅನ್ವಯ ಪೊಲೀಸರು ದೂರು ದಾಖಲಿಸಿದ್ದಾರೆ.

ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶ್ರೀ ವತ್ಸ ಅವರುಗಳು ಜಾತಿ ನಿಂದನೆ ಮಾಡಿದ್ದಾರೆಂದು ದೂರು ದಾಖಲಿಸಲಾಗಿತ್ತು.
2025ರ ಸೆ.15 ಮತ್ತು 16ರಂದು ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಕಚೇರಿಯಲ್ಲಿ ಹಾಗೂ ಮೈಸೂರು ಶಾಸಕ ಶ್ರೀ ವತ್ಸ ಅವರು ಮೈಸೂರು ಹಾಗೂ ತಮ್ಮ ಹೇಳಿಕೆಗಳಲ್ಲಿ ಬೆಂಗಳೂರಿನಲ್ಲಿ ಮೀಸಲಾತಿ ಸಾಮಾಜಿಕ ಜಾಲತಾಣಗಳಲ್ಲಿ ಕುರುಬರ ಎಸ್‌ ६३ ವಿಚಾರದಲ್ಲಿ ವಿರೋಧಿಸುತ್ತಿದ್ದಾರೆ.

ಅಲ್ಲದೇ ರಾಜ್ಯದ ಮುಖ್ಯಮಂತ್ರಿಯನ್ನು ವಿರೋಧಿಸುವ ಭರದಲ್ಲಿ ಇಡೀ ರಾಜ್ಯದಲ್ಲಿ ಇರುವ ಕುರುಬ ಸಮಾಜಕ್ಕೆ ಅವಮಾನ ಹಾಗೂ ದೌರ್ಜನ್ಯ ಮಾಡಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾಧ್ಯಮಗಳ ಮೂಲಕ ಪರಿಶಿಷ್ಟ ಪಂಗಡದವರು ಹಾಡೂ ವಾಲ್ಮೀಕಿ ಸಮಾಜದವರು ಕುರುಬ ಸಮಾಜದ ಮೇಲೆ ದಂಗೆ ಏಳಬೇಕು ಎನ್ನುವ ರೀತಿಯಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡಲಿದೆ. ಸಮಾಜದಿಂದ ಮತ್ತೊಂದು ಒಂದು ಸಮಾಜವನ್ನು ಪ್ರಚೋದಿಸುವ ಮೂಲಕ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕದಡಿದ್ದಾರೆ. ಇದೇ ರೀತಿ ಮುಂದುವರೆದರೆ ರಾಜ್ಯದಲ್ಲಿ ಅಶಾಂತಿ, ಜೀವಹಾನಿ ಸಾರ್ವಜನಿಕ ಕಟ್ಟಡ ಆಸ್ತಿಪಾಸ್ತಿ ಆಸ್ತಿ ಪಾಸ್ತಿ ಹಾನಿಯಾಗಿ ಜನಜೀವನ ಅಸ್ತವ್ಯಸ್ಥವಾಗಲಿದೆ ಎಂದು ಎಫ್‌ಐಆರ್ ನಲ್ಲಿ ವಿವರಿಸಿರುವುದು ಗೊತ್ತಾಗಿದೆ.

Tags:
error: Content is protected !!