Mysore
26
scattered clouds

Social Media

ಸೋಮವಾರ, 26 ಜನವರಿ 2026
Light
Dark

ಜಾತಿ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ : ಸಿಎಂ ಕರೆ

ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ನಾವೇ ನಂಬರ್ ಒನ್: ಸಿಎಂ
ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.

Tags:
error: Content is protected !!