Mysore
23
light rain

Social Media

ಮಂಗಳವಾರ, 24 ಫೆಬ್ರವರಿ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನ: ಎಂಎಲ್‌ಸಿ ಎಚ್.ವಿಶ್ವನಾಥ್‌ ವಿರುದ್ಧ ಎಫ್‌ಐಆರ್‌

mlc vishwanath pakistan

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಸಿದ್ದರಾಮಯ್ಯ ಅವರನನು ಉದ್ದೇಶಿಸಿ ಹೇಡಿ ಸೇರಿದಂತೆ ಅವಹೇಳನಕಾರಿ ಪದಗಳಿಂದ ನಿಂದಿನ ಮಾನಹಾನಿ ಉಂಟು ಮಾಡಿದ್ದಾರೆ ಎಂದು ಕೆಪಿಸಿಸಿ ಕಾನೂನು, ಮಾನವ ಹಕಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿ ಕವಿತಾ ಕಾಳೆ ಅವರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕವಿತಾ ಕಾಳೆ ಅವರ ದೂರನ್ನು ಆಧರಿಸಿ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

Tags:
error: Content is protected !!