Mysore
17
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ದಸರಾ ಉದ್ಘಾಟನೆ : ಚಾಮುಂಡಿ ಬೆಟ್ಟಕ್ಕೆ ಭಾರಿ ಭದ್ರತೆ

ಮೈಸೂರು : ನಾಡಹಬ್ಬ ದಸರಾ ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಉದ್ಘಾಟನೆಗೊಳ್ಳಲಿದ್ದು, ಇದೇ ಪ್ರಥಮ ಬಾರಿಗೆ ಬೆಟ್ಟದ ಆವರಣಕ್ಕೆ ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ಸುಮಾರು ೯೦೦ ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬುಕರ್ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರು ಸೋಮವಾರ ಬೆಳಿಗ್ಗೆ ನಾಡಹಬ್ಬಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು, ಶಾಸಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ನಡುವೆ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದು ಬೇಡ ಎಂದು ಕೆಲವು ಬಿಜೆಪಿ ಮುಖಂಡರು ವಿವಾದ ಹುಟ್ಟುಹಾಕಿದ್ದರು. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ ಬಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ರಸ್ತೆ ಬದಿಯಲ್ಲಿ ಹಾಗೂ ಪ್ರಮುಖ ಸ್ಥಳಗಳಲ್ಲಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಪಾಸ್ ಹೊಂದಿರುವವರನ್ನು ಮಾತ್ರ ಚಾಮುಂಡಿಬೆಟ್ಟದ ಆವರಣಕ್ಕೆ ಬಿಡಲು ಪೊಲೀಸರು ನಿರ್ಧರಿಸಿದ್ದಾರೆ.

ಇದೇ ವೇಳೆ ನಗರದ ಆಹಾರ ಮೇಳೆ ಉದ್ಘಾಟನೆಗೊಳ್ಳುವ ಮಹಾರಾಜ ಕಾಲೇಜು ಮೈದಾನ, ಫಲಪುಷ್ಪ ಪ್ರದರ್ಶನ ನಡೆಯಲಿರುವ ಕುಪ್ಪಣ್ಣ ಪಾರ್ಕ್, ವಸ್ತು ಪ್ರದರ್ಶನ ಆವರಣ, ಅರಮನೆ ಆವರಣ ಸೇರಿದಂತೆ ದಸರಾ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಪೊಲೀಸರನ್ನು ಭದ್ರತೆಗೆ ನಿಯೋಜಿಲಾಗುತ್ತಿದೆ.

Tags:
error: Content is protected !!