ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದ್ದು, ಉದ್ಘಾಟನಾ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಭಾಷಣ ಹೀಗಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಮೈಸೂರು ದಸರಾ ಆರಂಭವಾದದ್ದು ಹೇಗೆ ಎಂದು ದಸರಾ ಇತಿಹಾಸದ ತಿಳಿಸಿದರು.
ಸಂವಿಧಾನವನ್ನು ರಕ್ಷಣೆ ಮಾಡುವುದೇ ನಮ್ಮೆಲ್ಲರ ಕೆಲಸ. ಯಾರೂ ಕೂಡ ಸಂವಿಧಾನಕ್ಕಿಂತ ಮೇಲಲ್ಲ. ಸಂವಿಧಾನ ಅಡಿಯಲ್ಲಿ ನಾವು ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಬಾನು ಮುಷ್ತಾಕ್ ಅವರು ಹಕ್ಕುಗಳ ಹೋರಾಟಗಾರ್ತಿ, ಅವರು ಇಡೀ ದೇಶದ ಹೆಮ್ಮೆ. ಕಾರಣ ಅವರಿಗೆ ಬೂಕರ್ ಪ್ರಶಸ್ತಿ ಬಂದಿದೆ. ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ.
ದಸರಾ ಉತ್ಸವ ನಾಡಿನ ಸಮಸ್ತ ಜನರ ಉತ್ಸವ. ನಾವೆಲ್ಲರೂ ಒಂದೇ ಎಂದು ಹೇಳುವ ಮೂಲಕ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗೋಣ ಎಂದು ಕರೆ ನೀಡಿದರು.





