ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ನಿಂದ ಕೈಬಿಡುವಂತೆ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ 57ನೇ ಕೋರ್ಟ್‌ಗೆ ನಟ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಬಗ್ಗೆ ಕೋರ್ಟ್ ಶೀಘ್ರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಇನ್ನು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಇಂದು ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಲಿದೆ.
ಇದನ್ನು ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿ ಆರೋಪಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ.
ಇನ್ನು ಜೈಲಿನಲ್ಲಿ ಹಾಸಿಗೆ, ದಿಂಬು ನೀಡಬೇಕಾದ ಆದೇಶ ಪಾಲಿಸುತ್ತಿಲ್ಲ ಎಂದು ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತ ಆದೇಶವನ್ನು ನ್ಯಾಯಾಲಯ ಪ್ರಕಟಿಸಲಿದೆ.
ಜೈಲಿನ ನಿಯಮದ ಪ್ರಕಾರ ಹಾಸಿಗೆ, ದಿಂಬು, ಮೂಲಸೌಕರ್ಯ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಜೈಲು ಅಧಿಕಾರಿಗಳು ಪಾಲಿಸಿಲ್ಲವೆಂದು ದರ್ಶನ್ ಅರ್ಜಿ ಸಲ್ಲಿಸಿದ್ದರು. ಈ ಕುರಿತ ಆದೇಶವೂ ಇಂದು ಪ್ರಕಟವಾಗಲಿದೆ.





