Mysore
28
clear sky

Social Media

ಮಂಗಳವಾರ, 20 ಜನವರಿ 2026
Light
Dark

ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಅಂತಿಮ ನೋಟಿಸ್‌ ಜಾರಿ

mahesh shetty timrodi

ಮಂಗಳೂರು: ಎಸ್‌ಐಟಿ ಶೋಧದ ವೇಳೆ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿಗೆ ಮೂರನೇ ಹಾಗೂ ಅಂತಿಮ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ.

ಮನೆ ಶೋಧದ ಸಂದರ್ಭದಲ್ಲಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು 2 ತಲ್ವಾರ್‌, ಒಂದು ಬಂದೂಕನ್ನು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಎರಡು ನೋಟಿಸ್‌ ಜಾರಿ ಮಾಡಿದ್ದರು.

ಇದನ್ನು ಓದಿ : ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್‌ ಶೆಟ್ಟಿ ತಿಮರೋಡಿ ಗಡೀಪಾರು

ಆದರೆ ಮಹೇಶ್‌ ಶೆಟ್ಟಿ ತಿಮರೋಡಿ ಎರಡು ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲೇಬೇಕೆಂದು ಸೂಚನೆ ನೀಡಿ ಅಂತಿಮ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ.

ಇಂದು ಬೆಳ್ತಂಗಡಿ ಠಾಣೆಯ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿ ಮನೆಗೆ ತೆರಳಿ ನೋಟಿಸ್‌ ಅಂಟಿಸಿದ್ದಾರೆ. ಸೆಪ್ಟೆಂಬರ್.‌29ಕ್ಕೆ ವಿಚಾರಣೆಗೆ ಹಾಜರಾಗಬೇಕು. ಒಂದು ವೇಳೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನಕ್ಕೆ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Tags:
error: Content is protected !!