ಮಂಡ್ಯ: ಭಾರೀ ವಿರೋಧದ ನಡುವೆಯೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕಾವೇರಿ ಆರತಿಗೆ ಚಾಲನೆ ನೀಡಿದರು.
ಇಂದಿನಿಂದ ಐದು ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ನಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
ಇದನ್ನೂ ಓದಿ:-ಐತಿಹಾಸಿಕ ಚಿತ್ರಕ್ಕೆ ಶ್ರೀಮುರಳಿ ನಾಯಕ: ಪುನೀತ್ ರುದ್ರನಾಗ್ ನಿರ್ದೇಶನ
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾವೇರಿ ಆರತಿಗೆ ಚಾಲನೆ ನೀಡಿದರು.
ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾವೇರಿ ಆರತಿ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಜಲಾಶಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.





