Mysore
23
scattered clouds

Social Media

ಮಂಗಳವಾರ, 27 ಜನವರಿ 2026
Light
Dark

ವಿಶ್ವ ಪ್ರವಾಸೋದ್ಯಮ ದಿನ: ಆಯೋಜಕರ ವಿರುದ್ಧ ಶಾಸಕ ತನ್ವೀರ್‌ ಸೇಠ್‌ ಅಸಮಾಧಾನ

ಮೈಸೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿದು ಪ್ರವಾಸೋದ್ಯಮ ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು.

ಅರಮನೆ ಆವರಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ನಿರ್ವಹಣೆ ಹಾಗೂ ವ್ಯವಸ್ಥೆಯಲ್ಲಿ ದೋಷಗಳಿದ್ದವು.

ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಬಗ್ಗೆ ಅಸಮಾಧಾನ ಹೊರಹಾಕಿದ ಶಾಸಕ ತನ್ವೀರ್‌ ಸೇಠ್‌ ಅವರು, ಅರಮನೆ ಆವರಣದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೂ ಸಿದ್ಧತೆ ಮಾಡಿಕೊಳ್ಳಬೇಕು. ಈ ಕಾರ್ಯಕ್ರಮವು ಯಾವುದೇ ರೀತಿಯ ಯೋಜನೆಯಿಲ್ಲದೇ ನಡೆಯಿತು ಎಂದು ಆರೋಪಿಸಿದರು.

ಇದನ್ನು ಓದಿ : ಕಾವೇರಿ ನದಿಯಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪನವರ ಅಸ್ಥಿ ವಿಸರ್ಜನೆ

ಪ್ರವಾಸೋದ್ಯಮಕ್ಕೆ ಅತೀ ಹೆಚ್ಚಿನ ಆದ್ಯತೆ ಕೊಡಬೇಕು. ಕೇವಲ ನೆಪಕ್ಕಾಗಿ ಮಾತ್ರ ಕಾರ್ಯಕ್ರಮ ಮಾಡಬೇಕಿಲ್ಲ. ಬರುವ ಪ್ರವಾಸಿಗರಿಗೆ ಐತಿಹಾಸಿಕ ಸ್ಥಳಗಳನ್ನು ತೋರಿಸುವ ಕೆಲಸ ಆಗಬೇಕು. ಇಂದಿನ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಮಾತ್ರ ಸಿದ್ಧತೆ ಇಲ್ಲದೇ ನಡೆದಿದೆ ಎಂದು ಅಸಮಾಧಾನ ಹೊರಹಾಕಿದರು.

ಇನ್ನು ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಪ್ರತಿಯೊಂದಕ್ಕೂ ವಿಶ್ಲೇಷಣೆ ಮಾಡುವುದು ಸರಿಯಲ್ಲ. ತನಿಖೆ ಬಳಿಕ ಸತ್ಯಾ ಸತ್ಯತೆ ಎಲ್ಲಾ ಹೊರಗೆ ಬರುತ್ತದೆ. ಇದರ ಬಗ್ಗೆ ಹೆಚ್ಚಿಗೆ ಮಾತನಾಡಲ್ಲ. ಕ್ಷೇತ್ರದ ಪಾವಿತ್ರ್ಯತೆ ಕಾಪಾಡಬೇಕು ಎಂದು ಹೇಳಿದರು.

Tags:
error: Content is protected !!