Mysore
27
few clouds

Social Media

ಮಂಗಳವಾರ, 26 ಮೇ 2026
Light
Dark

ಕಾಲ್ತುಳಿತ ದುರಂತಕ್ಕೆ ತಮಿಳುನಾಡು ಸರ್ಕಾರವೇ ಕಾರಣ: ನಟ ವಿಜಯ್‌ ಗಂಭೀರ ಆರೋಪ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್‌ ದಳಪತಿ ಚುನಾವಣಾ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದ 40 ಜನರು ಸಾವನ್ನಪ್ಪಿದ್ದಾರೆ. ನೂರಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ನಟ ದಳಪತಿ ವಿಜಯ್‌, ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:-ಭಾರತ-ಪಾಕ್‌ ನಡುವೆ ಹೈವೋಲ್ಟೇಜ್‌ ಫೈನಲ್: ಭಾರತದ ಗೆಲುವಿಗೆ ವಿಘ್ನ ನಿವಾರಕನಿಗೆ ಪೂಜೆ

ತಮಿಳುನಾಡು ಸಿಎಂ ಸ್ಟಾಲಿನ್‌ ಸರ್ಕಾರದ ವಿರುದ್ಧ ನಟ ವಿಜಯ್‌ ವಾಗ್ದಾಳಿ ನಡೆಸಿದ್ದು, ತಮಿಳುನಾಡು ಸರ್ಕೃದ ಪಿತೂರಿಯಿಂದಲೇ ಕಾಲ್ತುಳಿತ ಸಂಭವಿಸಿದೆ. ವಿಶಾಲ ಮೈದಾನದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡಲಿಲ್ಲ. ಸ್ಟಾಲಿನ್‌ ಸರ್ಕಾರ ಸುರಕ್ಷಿತ ಪ್ರದೇಶವನ್ನು ನೀಡಿಲ್ಲ. ಇಕ್ಕಟ್ಟಿನ ಪ್ರದೇಶ ನೀಡಿದ್ದರಿಂದಲೇ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ ಎಂದು ಹೇಳಿದ್ದೃೆ.

ಕಾಲ್ತುಳಿತದ ಹಿಂದೆ ಪಿತೂರಿ, ಷಡ್ಯಂತ್ರವಿದೆ. ಈ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ವಿಜಯ್‌ ಗಂಭೀರ ಆರೋಪ ಮಾಡಿದ್ದಾರೆ.

Tags:
error: Content is protected !!