Mysore
26
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

ನಟ ದರ್ಶನ್‌ ಅರ್ಜಿ ವಿಚಾರಣೆ: ಅಕ್ಟೋಬರ್.‌9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಇತರೆ ಸೌಲಭ್ಯ ನೀಡದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆದಿದೆ.

57ನೇ ಸಿವಿಲ್‌ ಕೋರ್ಟ್‌ ವಿಚಾರಣೆ ನಡೆಸಿದ್ದು, ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್.‌9ಕ್ಕೆ ಕಾಯ್ದಿರಿಸಿದೆ.

ಇದನ್ನು ಓದಿ : ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಹಣ ಕಳುವು ಪ್ರಕರಣ: ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು

ಕೋರ್ಟ್‌ ಆದೇಶದ ಹೊರತಾಗಿಯೂ ದರ್ಶನ್‌ಗೆ ಯಾವುದೇ ಸವಲತ್ತುಗಳನ್ನು ಜೈಲಾಧಿಕಾರಿಗಳು ನೀಡಿಲ್ಲ. ಈ ಮೂಲಕ ಕೋರ್ಟ್‌ ಆದೇಶ ಉಲ್ಲಂಘನೆಯಾಗಿದೆ ಎಂದು ದರ್ಶನ್‌ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಜೈಲಿನ ನಿಯಮದ ಪ್ರಕಾರ ನಡೆದುಕೊಳ್ಳಲಾಗಿದೆ ಎಂದು ಸರ್ಕಾರಿ ವಕೀಲರು ವಾದ ಮಂಡಿಸಿದ್ದಾರೆ. ಈ ವೇಲೆ ದರ್ಶನ್‌ ಪರ ವಕೀಲ ಸುನಿಲ್‌, ಕೋರ್ಟ್‌ ಆದೇಶ ನೀಡಿದರೂ ದರ್ಶನ್‌ಗೆ ಯಾವುದೇ ಸವಲತ್ತು ನೀಡುತ್ತಿಲ್ಲ.

ದರ್ಶನ್‌ ಬೆನ್ನುನೋವಿನಿಂದ ಬಳಲುತ್ತಿದ್ದರೂ ಹೆಚ್ಚುವರಿ ಹಾಸಿಗೆ, ತಲೆದಿಂಬು ಸೇರಿದಂತೆ ಯಾವುದೇ ಸೌಲಭ್ಯ ನೀಡಿಲ್ಲ. ಇಡೀ ದೇಶದಲ್ಲಿಯೇ ಪಾಲನೆಯಾಗದಿರುವ ನಿಯಮ ದರ್ಶನ್‌ಗೆ ಅನ್ವಯವಾಗಿದೆ. ಕೋರ್ಟ್‌ ಆದೇಶವನ್ನು ಕೂಡ ಪಾಲಿಸದಿರುವುದು ನೋವುಂಟು ಮಾಡಿದೆ ಎಂದು ವಾದ ಮಂಡಿಸಿದ್ದಾರೆ.

Tags:
error: Content is protected !!