Mysore
29
scattered clouds

Social Media

ಶನಿವಾರ, 24 ಜನವರಿ 2026
Light
Dark

ಉಸಿರಾಟದ ಸಮಸ್ಯೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯದಿಂದ ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ.

ಇದನ್ನೂ ಓದಿ :-‘ದಿ ರಾಜಾಸಾಬ್’ ಟ್ರೈಲರ್ ಬಿಡುಗಡೆ: 2026ರ ಜನವರಿ 09ಕ್ಕೆ ಚಿತ್ರ

ನಿನ್ನೆ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು.

Tags:
error: Content is protected !!