ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಜೋರಾಗಿದ್ದು, ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.
ಇಂದು ದಸರಾ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದ್ದಾನೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.
ಅಭಿಮನ್ಯು ಆನೆಯು ಅರಮನೆ ಬಳಿಯಿಂದ ಚಿನ್ನದ ಅಂಬಾರಿಯನ್ನು ಹೊತ್ತು ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದಿಕ್ ವೃತ್ತ, ಬಂಬೂಬಜಾರ್ ಮೂಲಕ ಬನ್ನಿಮಂಟಪದವರೆಗೆ ಸುಮಾರು 5 ಕಿ.ಮೀ ದೂರ ಸಾಗಲಿದೆ.
ಜಂಬೂಸವಾರಿಗೆ ಆಕರ್ಷಕ ಸ್ತಬ್ಧಚಿತ್ರಗಳು, ಕಲಾತಂಡಗಲೂ ಸಾಥ್ ನೀಡುವ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಲಿವೆ.





