ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದ್ದು, ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯು ಅರಮನೆ ಪ್ರವೇಶಿಸಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಚಾಮುಂಡಿಬೆಟ್ಟದಿಂದ ನಾಡದೇವತೆ ಉತ್ಸವಮೂರ್ತಿಯೂ ಮೈಸೂರು ಅರಮನೆ ಪ್ರವೇಶಿಸಿದೆ.
ಇದನ್ನು ಓದಿ : ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಇಂದು ಬೆಳಿಗ್ಗೆಯೇ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಚಾಮುಂಡಿಬೆಟ್ಟದಿಂದ ಮಂಟದದಲ್ಲಿ ಮೆರವಣಿಗೆ ಮೂಲಕ ಉತ್ಸವ ಮೂರ್ತಿಯನ್ನು ಅರಮನೆ ದ್ವಾರದ ಬಳಿ ತರಲಾಯಿತು. ಈ ವೇಳೆ ಅರಮನೆ ದ್ವಾರದ ಬಳಿಯೂ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.





