Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮೈಸೂರು ದಸರಾ: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ವೀಕ್ಷಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಂಭ್ರಮ ಕಳೆಗಟ್ಟಿದ್ದು, ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ನಡೆಯುತ್ತಿದೆ.

ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದೆ.

ಇದನ್ನು ಓದಿ : ಮೈಸೂರು ದಸರಾ 2025: ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ

ಕ್ಯಾಪ್ಟನ್‌ ಅಭಿಮನ್ಯುಗೆ ಚಿನ್ನದ ಅಂಬಾರಿ ಕಟ್ಟುವ ಕೆಲಸ ನಡೆಯುತ್ತಿದ್ದು, ಇದನ್ನು ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಅವರು ಅರಮನೆಯ ಕಿಟಕಿ ಬಳಿ ನಿಂತು ವೀಕ್ಷಣೆ ಮಾಡಿದರು.

ಅಂಬಾರಿ ಒಳಗೆ ನಾಡದೇವತೆ ಚಾಮುಂಡೇಶ್ವರಿ ಕಂಗೊಳಿಸುತ್ತಿದ್ದು, ಇದನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

Tags:
error: Content is protected !!