Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಫೇಸ್‌ಮೇಕರ್‌ ಅಳವಡಿಕೆ ಯಶಸ್ವಿ ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್‌ನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದು, ʼಖರ್ಗೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಶೀಘ್ರ ಕೆಲಸ ಆರಂಭಿಸುವ ನಿರೀಕ್ಷೆ ಇದೆ’ ಎಂದು ಹೇಳಿದೆ.

ದಿಢೀರ್ ಉಸಿರಾಟದ ಸಮಸ್ಯೆಗೆ ಸಿಲುಕಿದ್ದ ಖರ್ಗೆ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ್ದ ವೈದ್ಯರು ಹೃದಯ ಬಡಿತದಲ್ಲಿ ಏರುಪೇರಾಗಿರುವುದು ಪತ್ತೆ ಮಾಡಿದ್ದರು.

ಇದನ್ನು ಓದಿ : ಉಸಿರಾಟದ ಸಮಸ್ಯೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬಳಿಕ ಬುಧವಾರ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ, ಹೃದಯದ ಬಡಿತ ನಿಯಂತ್ರಣಕ್ಕೆ ತರುವಂಥ ಶಾಶ್ವತ ಪೇಸ್ ಮೇಕರ್ ಅಳವಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದ ನಂತರ ಗಣ್ಯರು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ.ಪರಮೇಶ್ವ‌ರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರು ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ, ಧೀರ್ಘಾಯುಷ್ಯಕ್ಕೆ ಹಾರೈಸಿದ್ದಾರೆ.

ಈ ನಡುವೆ, ಸಚಿವ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದಾಗಿ ಅವರಿಗೆ ಪೇಸ್‌ಮೇಕರ್‌ ಅಳವಡಿಕೆಗೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್ ಅಳವಡಿಸಲಾಗಿದೆ. ಅದನ್ನು ಹೊರತುಪಡಿಸಿ ಬೇರೆ ಸಮಸ್ಯೆಯಿಲ್ಲ. ವೈದ್ಯರು ಎರಡೂರು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

Tags:
error: Content is protected !!