ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು.
ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ಇದನ್ನೂ ಓದಿ:-ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ: ಸಚಿವ ಎಚ್.ಸಿ.ಮಹದೇವಪ್ಪ
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು. ಮೈಸೂರಿನ ವಿಮಾನ ನಿಲ್ದಾಣದಿಂದ ನೇರವಾಗಿ ಬೆಳಗಾವಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.





