ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳು ಆನ್‌ಲೈನ್ ಗೇಮಿಂಗ್ ಕಂಪನಿಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ಕೋರಮಂಗಲದಲ್ಲಿರುವ ಗೋಲ್ಟನ್ ಏಸಸ್ ಎಂಬ ಆನ್‌ಲೈನ್ ಗೇಮಿಂಗ್ ಕಂಪನಿ ಮೇಲೆ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಕಂಪನಿಯಲ್ಲಿದ್ದ ವಸ್ತುಗಳನ್ನು ಒಡೆದು ಹಾಕಿ ಧ್ವಂಸ ಮಾಡಿದ್ದಾರೆ.
ಇದನ್ನೂ ಓದಿ:-ಹಾಸನ: ಜಾತಿಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿನಾಯಿಗಳ ದಾಳಿ
ಗ್ರಾಹಕರು ಆನ್‌ಲೈನ್ ಬೆಟ್ಟಿಂಗ್ ಆಡುತ್ತಿದ್ದಾಗಲೇ ದಾಳಿ ನಡೆಸಿದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು, ಆನ್‌ಲೈನ್ ಗೇಮಿಂಗ್ ಕಂಪನಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್, ಸುಪ್ರೀಂಕೋರ್ಟ್ ಆನ್‌ಲೈನ್ ಗೇಮಿಂಗ್‌ನ್ನು ನಿಷೇಧಿಸಿವೆ. ಆದರೂ ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ದಂಧೆ ನಡೆಸಲಾಗುತ್ತಿದೆ. ಆನ್‌ಲೈನ್ ಗೇಮಿಂಗ್‌ನಿಂದ ಯುವಕರು ಬಲಿಯಾಗುತ್ತಿದ್ದಾರೆ. ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.





