ಕಠ್ಮಂಡು: ನೇಪಾಳದಲ್ಲಿ ಧಾರಾಕಾರ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದ್ದು, ಇದುವರೆಗೂ 42 ಜನರು ಸಾವನ್ನಪ್ಪಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿದ್ದು, ಭೂಕುಸಿತ ಸಂಭವಿಸಿದೆ. ಇದುವರೆಗೂ 42 ಜನರು ಸಾವನ್ನಪ್ಪಿದ್ದು, ಐದಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ
ಈ ಕುರಿತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು, ಘಟನಾ ಸ್ಥಳಗಳಲ್ಲಿ ಬೀಡು ಬಿಟ್ಟಿರುವ ನೇಪಾಳ ಸೇನೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮಳೆ ಹೆಚ್ಚುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿ ಉಂಟಾಗಿದ್ದು, ವಿಳಂಬವಾಗುತ್ತಿದೆ ಎಂದು ಹೇಳಿದರು.
ನೇಪಾಳದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಕಠ್ಮಂಡುಗೆ ಬರುವ ಹಾಗೂ ತೆರಳುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.





