ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ಟೋಬರ್.12ರವರೆಗೂ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಅಕ್ಟೋಬರ್.9ರಿಂದ 12ರವರೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ದೇಶಾದ್ಯಂತ ಅಕ್ಟೋಬರ್‌ನಲ್ಲಿ ದೀರ್ಘಾವಧಿಯ ಸರಾಸರಿ 74.4 ಮಿಲಿ ಮೀಟರ್‌ಗಿಂತ 115 ಪ್ರತಿಶತಕ್ಕಿಂತ ಹೆಚ್ಚಿನ ಮಳೆ ಆಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.





