Mysore
24
broken clouds

Social Media

ಶನಿವಾರ, 24 ಜನವರಿ 2026
Light
Dark

ರಾಜ್ಯದಲ್ಲಿ ಅಕ್ಟೋಬರ್.‌12ರವರೆಗೆ ಸಮೀಕ್ಷೆ ಅವಧಿ ವಿಸ್ತರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳುತ್ತಿರುವ ಸಮೀಕ್ಷೆಯನ್ನು ಅಕ್ಟೋಬರ್.‌12ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯದ ಮರು ನಿಗದಿ ಮಾಡಲಾಗಿದೆ.

ಸಮೀಕ್ಷೆಯು ಪೂರ್ಣಗೊಳ್ಳಲು ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗಂಡು ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರಿಷ್ಕರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮ ವಹಿಸಲು ನಿರ್ಧರಿಸಲಾಗಿದೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ: ಇಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ಟೋಬರ್‌.8ರಿಂದ 24ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧಾರ ಮಾಡಲಾಗಿದೆ.

ರಾಜ್ಯದ ಇತರೆ ಭಾಗಗಳಲ್ಲಿ: ಇಲ್ಲಿ ಅಕ್ಟೋಬರ್.‌8ರಿಂದ ಅಕ್ಟೋಬರ್.‌12ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಸಲು ನಿರ್ಧಾರ ಮಾಡಲಾಗಿದೆ.

Tags:
error: Content is protected !!