Mysore
34
few clouds

Social Media

ಶನಿವಾರ, 11 ಏಪ್ರಿಲ 2026
Light
Dark

ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಎಚ್.ಡಿ.ಕೋಟೆ: ಚಿಕಿತ್ಸೆಗೆ ದಾಖಲಾಗಿದ್ದರೂ ಸಹ ಆಸ್ಪತ್ರೆಯಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಎಚ್.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಆಸ್ಪತ್ರೆಗೆ ದಾಖಲಾದ ಗಾಯಾಳುಗಳು, ಆಸ್ಪತ್ರೆಯಲ್ಲೇ ಗಲಾಟೆ ಮಾಡಿದ್ದು, ಆಸ್ಪತ್ರೆ ಸಿಬ್ಬಂದಿ ಗಲಾಟೆ ನಿಯಂತ್ರಿಸಲು ಹರಸಾಹಸ ಪಟ್ಟ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಇದನ್ನು ಓದಿ :  ವಿರಾಜಪೇಟೆ ತಾಲ್ಲೂಕು ಆಸ್ಪತ್ರೆ ಶೀಘ್ರ ಮೇಲ್ದರ್ಜೆಗೆ

ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ನಾಗಮೂರ್ತಿ, ರವಿ, ನಯಾಜ್‌, ಅಪ್ಸರ್‌ ನಡುವೆ ಈ ಗಲಾಟೆ ನಡೆದಿದೆ.

ಜಮೀನಿನಲ್ಲೇ ಹಲ್ಲೆ-ಪ್ರತಿಹಲ್ಲೆ ನಡೆದಿದ್ದು, ಗಾಯಗೊಂಡಿದ್ದ ನಾಗಮೂರ್ತಿ ಹಾಗೂ ರವಿ ಎಂಬುವವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಆಸ್ಪತ್ರೆಗೆ ಬಂದ ನಯಾಜ್‌ ಹಾಗೂ ಅಪ್ಸರ್‌ ಸೇರಿದಂತೆ ಇತರರು ನಾಗಮೂರ್ತಿ ಹಾಗೂ ರವಿ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಸಂಬಂಧ ನಯಾಜ್‌ ಹಾಗೂ ಅಪ್ಸರ್‌ ಸೇರಿದಂತೆ ಒಂದೇ ಗುಂಪಿನ 13 ಮಂದಿ ವಿರುದ್ಧ ಎಚ್.ಡಿ.ಕೋಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:
error: Content is protected !!