Mysore
29
overcast clouds

Social Media

ಭಾನುವಾರ, 13 ಸೆಪ್ಟೆಂಬರ್ 2026
Light
Dark

ಸಿಎಂ ವಿರುದ್ಧ ಗುಡುಗಿದ ಕಾಂಗ್ರೆಸ್‌ ನಾಯಕ ವಿ.ಎಸ್.ಉಗ್ರಪ್ಪ

ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ ನಾಯಕ ವಿ.ಎಸ್.ಉಗ್ರಪ್ಪ ಗುಡುಗಿದ್ದಾರೆ.

ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಿದರೆ ಸುಮ್ಮನೆ ಇರುವುದಿಲ್ಲ. ಇದು ಸಾಧ್ಯವಾದರೆ ಜನರ ಜೊತೆ ನಿಂತು ಉಗ್ರ ಹೋರಾಟ ಮಾಡುತ್ತೇವೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯನವರೇ, ನಿಮಗೆ ಕೂ ಮುಗಿತೀನಿ. ಎಷ್ಟು ವರ್ಷ ಆದರೂ ನೀವು ಮಾಜಿ ಆಗಲೇಬೇಕು. ನಮ್ಮ ತಟ್ಟೆಗೆ ಕೈ ಹಾಕಿದರೆ, ಜನರ ಜೊತೆಯಲ್ಲಿ ನಿಂತು ಹೋರಾಟ ಮಾಡುತ್ತೇವೆ ಎಂದು ತೀಕ್ಷ್ಣವಾಗಿ ಎಚ್ಚರಿಸಿದ್ದಾರೆ.

Tags:
error: Content is protected !!