Mysore
23
scattered clouds

Social Media

ಶನಿವಾರ, 31 ಜನವರಿ 2026
Light
Dark

ಮಂಡ್ಯ : ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಲು ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು.

ಇದನ್ನೂ ಓದಿ: ಓದುಗರ ಪತ್ರ: ಸಿಜೆಐ ಮೇಲಿನ ಅಪಕೃತ್ಯ ಖಂಡನೀಯ

ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು ಹೇಳಿದರು.

ಕಾಮಗಾರಿಗೆ ಅಗತ್ಯವಿರುವ ಹೆಚ್ಚುವರಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಅವರು ನಿರ್ದೇಶನ ನೀಡಿದರು.

ರಾಷ್ಟೀಯ ಹೆದ್ದಾರಿ 150 A ರಲ್ಲಿ ಕೆ.ಬಿ ಕ್ರಾಸ್ ನಿಂದ ಚುಂಚನಹಳ್ಳಿ ರಸ್ತೆ ವಿಸ್ತರಣೆ, ಮೆಲು ಸೇತುವೆ ಕಾಮಗಾರಿಯನ್ನು ದೂರದೃಷ್ಟಿ ಚಿಂತನೆಯೊಂದಿಗೆ ರೂಪಿಸಿ ಅನುಷ್ಠಾನ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೆ ಮತ್ತು ಅದಕ್ಕೆ ಸಂಪರ್ಕಿತ ಸರ್ವಿಸ್ ರಸ್ತೆಗಳಲ್ಲಿ ಬಾಕಿಯಿರುವ ಕಾಮಗಾರಿಗಳನ್ನು, ಹಾಗೆಯೇ ಬೆಂಗಳೂರಿನಿಂದ ಹಾಸನ, ಮೈಸೂರು-ಕೆ.ಆರ್. ಪೇಟೆ ಮತ್ತು ಮೈಸೂರು-ನಾಗಮಂಗಲ ರಸ್ತೆಗಳಿಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆ ಮತ್ತು ಇತರ ಕಾನೂನು ಕಾರ್ಯವಿಧಾನಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು..

ಹಾಗೆಯೇ, ಮಂಡ್ಯ ಜಿಲ್ಲೆಯಲ್ಲಿ ಹಾದುಹೋಗುವ ಎಲ್ಲಾ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು ಮತ್ತು ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಚಿವ ಚಲುವರಾಯಸ್ವಾಮಿಯವರು ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

Tags:
error: Content is protected !!