Mysore
24
overcast clouds

Social Media

ಮಂಗಳವಾರ, 05 ಮೇ 2026
Light
Dark

ರಾಜೋತ್ಸವ ಪ್ರಶಸ್ತಿ | ಆನ್‌ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಇಲಾಖೆ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆನ್ ಲೈನ್ ಮೂಲಕ ಅರ್ಜಿ ಕರೆಯುವ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.

ಪ್ರಶಸ್ತಿಗೆ ಅರ್ಹವ್ಯಕ್ತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಚಿಸಲಾಗುವ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಅಂತಿಮಗೊಳಿಸಲಿದೆ. ಈ ವರ್ಷ 70 ಜನ ಅರ್ಹ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳನ್ನು ಸಹ ಪ್ರಶಸ್ತಿ ಸಲಹಾ ಸಮಿತಿ ಮುಂದೆ ಮಂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Tags:
error: Content is protected !!