Mysore
29
scattered clouds

Social Media

ಶನಿವಾರ, 24 ಜನವರಿ 2026
Light
Dark

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌

ಹಾಸನ: ಹಾಸನದ ಅಧಿದೇವತೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ಓಪನ್‌ ಆಗಿದ್ದು, ನಾಳೆಯಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಐತಿಹಾಸಿಕ ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಇಂದು ಓಪನ್‌ ಆಗಿದ್ದು, ಹಾಸನಾಂಬೆ ದೇವಾಲಯದಲ್ಲಿ ಪೂಜೆ ಪುನಸ್ಕಾರಗಳು ಆರಂಭವಾಗಿವೆ.

ಇದನ್ನು ಓದಿ : ಹಾಸನಾಂಭ ದರ್ಶನ | ಮೈಸೂರು ಸೇರಿದಂತೆ ವಿವಿಧ ಜಿಲ್ಲೆಯಿಂದ ಹೆಚ್ಚುವರಿ ಬಸ್‌

ಈ ವೇಳೆ ಸಚಿವ ಕೃಷ್ಣಭೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಸಂಸದ ಶ್ರೇಯಸ್‌ ಪಟೇಲ್‌ ಸೇರಿದಂತೆ ಮತ್ತಿತರರು ಹಾಜರಿದ್ದರು.

ಆಶ್ವೀಜ ಮಾಸದ ಮೊದಲ ಗುರುವಾರ ಅರಸು ವಂಶಸ್ಥರು ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು.

ನಾಳೆಯಿಂದ ಹಾಸನಾಂಬೆ ಭಕ್ತರಿಗೆ ದರ್ಶನ ನೀಡಲಿದ್ದು, ತಾಯಿಯ ದರ್ಶನಕ್ಕೆ ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

ಬಲಿಪಾಡ್ಯಮಿಯ ಮಾರನೇಯ ದಿನ ಗಣ್ಯರ ಸಮ್ಮುಖದಲ್ಲಿ ದೇವಿಗೆ ದೀಪ, ಅಕ್ಕಿ, ನೈವೇದ್ಯಾ ಸೇರಿದಂತೆ ವಿವಿಧ ಅಲಂಕಾರಗಳು ಇರುವಂತೆಯೇ ಬಾಗಿಲನ್ನು ಮುಚ್ಚಲಾಗುತ್ತದೆ.

Tags:
error: Content is protected !!