Mysore
27
clear sky

Social Media

ಗುರುವಾರ, 22 ಜನವರಿ 2026
Light
Dark

ವೀರೇಂದ್ರ ಪಪ್ಪಿ ಆಸ್ತಿ ಕಂಡು ಬೆಚ್ಚಿದ ಇಡಿ ; 40ಕೆಜಿ ಚಿನ್ನ ಸೀಜ್…!

ಬೆಂಗಳೂರು : ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಪಟ್ಟಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮೇಲೆ ಮತ್ತೆ ಜಾರಿ ನಿದೇರ್ಶನಾಲಯ (ಇ.ಡಿ) ಅಧಿಕಾರಿಗಳು ಮತ್ತೆ ದಾಳಿ ನಡೆಸಲಾಗಿದ್ದು 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿಯನ್ನು ಪತ್ತೆಹಚ್ಚಿದೆ.

ಗುರುವಾರ ಚಿತ್ರದುರ್ಗ ಜಿಲ್ಲೆಯ ಚಳ್ಳಿಕೆರೆಯ ಫೆಡರಲ್ ಬ್ಯಾಂಕ್ ಸೇರಿದಂತೆ ದಾಳಿ ನಡೆಸಿರುವ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ 51 ಕೋಟಿ ಮೌಲ್ಯದ ಚಿನ್ನದ ಗಡಿಯನ್ನು ಪತ್ತೆಹಚ್ಚಿದೆ. ಈವರೆಗೂ ಈಡಿ ಅಧಿಕಾರಿಗಳು ವೀರೇಂದ್ರ ಪಪ್ಪಿಗೆ ಸೇರಿದ 200 ಕೋಟಿ ಹೆಚ್ಚು ಮೌಲ್ಯದ ನಗದು ಚಿನ್ನಾಭರಣ ಬೆಲೆ ಬಾಳುವ ವಾಹನಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಿದೆ.

ಗೋವಾ ರಾಜಧಾನಿ ಪಣಜಿಯಲ್ಲಿ ಕ್ಯಾಸಿನೋ ನಡೆಸುತ್ತಿರುವ ನಡೆಸುತ್ತಿರುವ ವೀರೇಂದ್ರ ಪಪ್ಪಿ, ಅಕ್ರಮ ಬೆಟ್ಟಿಂಗ್ ನಲ್ಲಿ ಸುಮಾರು 2000 ಕೋಟಿಗೂ ಅಧಿಕ ಲಾಭಗಳಿಸಿದ್ದಾರೆಂಬಯದನ್ನು ಇಡಿ ಅಧಿಕಾರಿಗಳು ಪತ್ತೆ ಹಚ್ಚಿದರು . ಈ ಹಿಂದೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು 103 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದರು.

ಇದನ್ನು ಓದಿ : ಮೈಸೂರು ಮುಡಾ ಹಗರಣ: ಇಡಿಯಿಂದ 440 ಕೋಟಿ ಮೌಲ್ಯದ ಅಕ್ರಮ ಆಸ್ತಿ ಮುಟ್ಟುಗೋಲು

ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.

ದಾಳಿ ವೇಳೆ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಸದ್ಯ ವಿರೇಂದ್ರ ಪಪ್ಪಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Tags:
error: Content is protected !!