Mysore
25
scattered clouds

Social Media

ಬುಧವಾರ, 18 ಮಾರ್ಚ್ 2026
Light
Dark

ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ, ಮೈಸೂರಿಗೆ ಯೆಲ್ಲೋ ಅಲರ್ಟ್‌

Rain Intensifies; Red Alert Issued

ಮೈಸೂರು : ರಾಜ್ಯದಲ್ಲಿ ನಾಳೆಯೂ ವರುಣನ ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ ಮೈಸೂರು ಮತ್ತು ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:-ದರ್ಶನ್‌ಗೆ ಸಿಗದ ಅಗತ್ಯ ಸೌಲಭ್ಯ : ಜೈಲು ಪರಿಶೀಲಿಸಿದ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರಕ್ಕೆ ಕೋರ್ಟ್‌ ಸೂಚನೆ

ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ, ಬಳ್ಳಾರಿ, ಕೊಡಗು, ಮೈಸೂರು ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಯೆಲ್ಲೋ​ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್​, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಂದ ನಾಳೆ ವರುಣ ದೂರ ಇರಲಿದ್ದು, ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇಲ್ಲಿ ಕಂಡುಬರಲಿದೆ ಎಂದು ಇಲಾಖೆ ತಿಳಿಸಿದೆ.

Tags:
error: Content is protected !!