Mysore
17
clear sky

Social Media

ಗುರುವಾರ, 22 ಜನವರಿ 2026
Light
Dark

ಅಕ್ಟೋಬರ್.‌17ರಂದು ಮೈಸೂರಿನಲ್ಲಿ ಬೃಹತ್‌ ಉದ್ಯೋಗ ಮೇಳ: ಸಚಿವ ಡಾ.ಶರಣ ಪ್ರಕಾಶ್‌ ಆರ್ ಪಾಟೀಲ್

ಮೈಸೂರು: ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ, ಜೀವನೋಪಾಯ ಇಲಾಖೆ ವತಿಯಿಂದ ಇದೇ ಅಕ್ಟೋಬರ್.‌17ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ಸಚಿವ ಡಾ.ಶರಣ ಪ್ರಕಾಶ್‌ ಆರ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರಿನಲ್ಲಿ ಬೃಹತ್ ಉದ್ಯೋಗ ಮೇಳ ಮೈಸೂರಿನಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾವು ಉದ್ಯೋಗ ಮೇಳ ಮಾಡಿದ್ದೇವೆ. ಈ ಉದ್ಯೋಗ ಮೇಳದಲ್ಲಿ ಉದ್ಯೋಗಕಾಂಕ್ಷಿಗಳ ರಿಜಿಸ್ಟ್ರೇಷನ್‌ಗೆ ಅವಕಾಶ ಮಾಡಿಕೊಟ್ಟಿದ್ದೇವೆ. 24 ಸಾವಿರ ನೋಂದಣಿ ಮಾಡಿಕೊಂಡಿದ್ದಾರೆ. ಅತಿ ಹೆಚ್ಚು ಜನ ಮೈಸೂರಿನವರೇ ನೋಂದಣಿ ಮಾಡಿದ್ದಾರೆ. 15 ಸಾವಿರ ಉದ್ಯೋಗಕಾಂಕ್ಷಿಗಳ ಪ್ರೊಫೈಲಿಂಗ್ ಫಿಲ್ ಆಗಿದೆ. 221 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ.

ಪ್ರಸ್ತುತ 45 ಸಾವಿರ ಉದ್ಯೋಗಗಳು ಇಲ್ಲಿ ಖಾಲಿ ಇವೆ. ಅಕ್ಟೋಬರ್.17ರಂದು ಬೆಳಿಗ್ಗೆ 9‌ ಗಂಟೆಯಿಂದ ಸಂಜೆ 5 ಗಂಟೆವರೆಗೆ ಉದ್ಯೋಗ ಮೇಳ ಇರುತ್ತದೆ. ಇತರೆ ಜಿಲ್ಲೆಯಿಂದ ಬರುವವರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಉದ್ಯೋಗ ಮೇಳ ಮಾಡುವುದರಿಂದ ಉದ್ಯೋಗಾಕಾಂಕ್ಷಿಗಳ ಮಾಹಿತಿ ತಿಳಿಯುತ್ತದೆ. ಯುವಕರ ಹಿತದೃಷ್ಟಿಯಿಂದ ಉದ್ಯೋಗ ಮೇಳ ಮಾಡುತ್ತಿದ್ದೇವೆ. 43,500 ಜನ ಯುವನಿಧಿ ಫಲಾನುಭವಿಗಳಿದ್ದಾರೆ. ಉದ್ಯೋಗ ಮೇಳದಿಂದ ಇದುವರೆಗೆ 13 ಸಾವಿರ ಜನರಿಗೆ ಉದ್ಯೋಗ ಸಿಕ್ಕಿದೆ. ಎಲ್ಲರೂ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ದೇಶದಲ್ಲಿ ನಿರುದ್ಯೋಗ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ. ಇದನ್ನು ನಿವಾರಿಸಲು ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಆದರೆ ರಾಜ್ಯ ಸರ್ಕಾರ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಉದ್ಯೋಗ ಮೇಳ ಆಯೋಜನೆ ಮೂಲಕ ನಿರುದ್ಯೋಗ ನಿವಾರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದರು.

Tags:
error: Content is protected !!