Mysore
17
clear sky

Social Media

ಬುಧವಾರ, 21 ಜನವರಿ 2026
Light
Dark

ಅಕ್ಟೋಬರ್.‌16ರಂದು ಬಳ್ಳಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಆಗಮನ

nirmala seetharam

ಬಳ್ಳಾರಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇದೇ ಅಕ್ಟೋಬರ್.‌16ರಂದು ಬಳ್ಳಾರಿ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಮಧ್ಯಾಹ್ನ 1.45ಕ್ಕೆ ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಬಾಗೇವಾಡಿ ಗ್ರಾಮದ ಗ್ರಾಮ ಪಂಚಾಯತ್‌ನ ಗ್ರಂಥಾಲಯಕ್ಕೆ ಭೇಟಿ ನೀಡಲಿದ್ದಾರೆ.

ಬಳಿಕ ಮಧ್ಯಾಹ್ನ 3 ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಕೊಂಚಿಕೇರಿ ಗ್ರಾಮದಲ್ಲಿ ಏರ್ಪಡಿಸಿರುವ ಸಂಸದೀಯ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿಯಡಿ ರೈತರಿಗೆ ಸ್ಥಳೀಯ ಕೃಷಿ ತರಬೇತಿ ಕೇಂದ್ರ ಮತ್ತು ಕೃಷಿ ಸಂಸ್ಕರಣೆ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4.45ಕ್ಕೆ ಬಳ್ಳಾರಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ಕರ್ನಾಟಕ ಬ್ಯಾಂಕ್‌ನ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿರುವ ನಿರ್ಮಲಾ ಸೀತಾರಾಮನ್‌ ಅವರು, ಅಕ್ಟೋಬರ್.17ರಂದು ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ತೆರಳಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Tags:
error: Content is protected !!