ಬೆಂಗಳೂರು: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಿಎಂ ಹಾಗೂ ಡಿಸಿಎಂ ಮತ್ತು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಹಿರಿತನವನ್ನು ಪರಿಗಣಿಸುತ್ತಾರೆ. ಈ ಬಗ್ಗೆ ನನಗೆ ತುಂಬಾ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು ನೋಡೋಣ. ರಾಜ್ಯದಲ್ಲಿ ಯಾವ ಕ್ರಾಂತಿಯೂ ನಡೆಯಲ್ಲ. ಇದೆಲ್ಲಾ ಕೇವಲ ಊಹಾಪೋಹ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದರು.
ಇದನ್ನು ಓದಿ: ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್ ಒಂದು ಅವಕಾಶ ನೀಡುವ ವಿಶ್ವಾಸವಿದೆ. ಪಕ್ಷವನ್ನು ಅಧಿಕಾರಕ್ಕೆ ತರಲು ಡಿಕೆಶಿ ತುಂಬಾ ಶ್ರಮ ವಹಿಸಿದ್ದಾರೆ. ಹಾಗಾಗಿ ಡಿಕೆಶಿಗೆ ಒಂದು ಅವಕಾಶ ನೀಡುವ ವಿಶ್ವಾಸವಿದೆ ಎಂದು ಹೇಳಿದರು.





