Mysore
18
clear sky

Social Media

ಮಂಗಳವಾರ, 20 ಜನವರಿ 2026
Light
Dark

ಎಸ್‌ಎಸ್‌ಎಲ್‌ಸಿ, ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್:‌ ಏನದು ಗೊತ್ತಾ?

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಪಾಸ್‌ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್‌ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನು ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ: ಪೋಷಕರ ಆಕ್ರೋಶ

ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ಬಳಿಕ ನಿರ್ಧಾರ ಮಾಡುತ್ತೇವೆ. ಎಲ್ಲಾ ವಿಷಯಗಳಿಗೆ ನಿಗದಿ ಮಾಡಿರುವ ಉತ್ತೀರ್ಣ ಅಂಕ 35ನ್ನು 33ಕ್ಕೆ ಇಳಿಸುವ ಬಗ್ಗೆ ಚರ್ಚಿಸಲು ಸಾರ್ವಜನಿಕ ವಲಯಕ್ಕೆ ಬಿಟ್ಟಿದ್ದೇವೆ.

ಅದರಲ್ಲಿ ಸುಮಾರು 701 ಮಂದಿ 33 ಅಂಕಗಳ ಪರವಾಗಿಯೂ ಹಾಗೂ 35ರ ಪರವಾಗಿ ಕೇವಲ 8 ಅಭಿಪ್ರಾಯಗಳು ಬಂದವು. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದ ನಮ್ಮ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ನಾಳೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

Tags:
error: Content is protected !!