Mysore
26
clear sky

Social Media

ಗುರುವಾರ, 22 ಜನವರಿ 2026
Light
Dark

ಓದುಗರ ಪತ್ರ: ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಸ್ವಾಗತಾರ್ಹ

ಓದುಗರ ಪತ್ರ

ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ ಹಾಗೂ ಡ್ರಾಮಾ ಕೇರ್, ಸೆಂಟರ್ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ್ ಅವರು ತಿಳಿಸಿರುವುದು ಶ್ಲಾಘನೀಯ.

ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯಕ್ಕೆ ಮೆಡಿಕಲ್ ಸೀಟುಗಳು ಹೆಚ್ಚಳವಾಗುತ್ತವೆ. ಹಾಗೂ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ಬಡಜನರಿಗೆ ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ಸಿಗುತ್ತವೆ.

-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್. ಡಿ. ಕೋಟೆ ತಾ.

Tags:
error: Content is protected !!