Mysore
15
few clouds

Social Media

ಗುರುವಾರ, 22 ಜನವರಿ 2026
Light
Dark

ಮೋದಿಗೆ ಟ್ರಂಪ್ ಕಂಡರೆ ಭಯ : ರಾಹುಲ್ ಗಾಂಧಿ ಟೀಕೆ

rahulgandhi

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೋಡಿ ಭಯಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ರಷ್ಯಾದಿಂದ ತೈಲ ಖರೀದಿಸಬೇಕಾ ಅಥವಾ ಬೇಡಾ ಎಂಬ ಕುರಿತು ನಿರ್ಧರಿಸಲು ಮತ್ತು ಘೋಷಿಸಲು ಅವರು ಅಮೆರಿಕ ನಾಯಕರಿಗೆ ಅವಕಾಶ ಕೊಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ತಮ್ಮ ಸ್ನೇಹಿತ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂಬ ಸಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯ ಬೆನ್ನಲ್ಲೇ ಈ ಟೀಕೆ ವ್ಯಕ್ತವಾಗಿದೆ.

ಇದನ್ನೂ ಓದಿ:-ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಮೋದಿ ಅವರು ಟ್ರಂಪ್ ಬಗ್ಗೆ ಭಯ ಹೊಂದಿದ್ದಾರೆ. ಭಾರತವು ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ನಿರ್ಧರಿಸಲು ಮತ್ತು ಘೋಷಿಸಲು ಟ್ರಂಪ್‌ಗೆ ಅವಕಾಶ ನೀಡುತ್ತಿದ್ದಾರೆ. ಪದೇ ಪದೇ ತಿರಸ್ಕಾರದ ಹೊರತಾಗಿಯೂ ಅಭಿನಂದನಾ ಸಂದೇಶಗಳನ್ನು ಕಳುಹಿಸುತ್ತಲೇ ಇರುತ್ತಾರೆ. ಅಮೆರಿಕಕ್ಕೆ ಹಣಕಾಸು ಸಚಿವರ ಭೇಟಿಯನ್ನು ರದ್ದುಗೊಳಿಸಲಾಗಿದೆ. ಶರ್ಮ್ ಎಲ್ ಶೇಖ್ ಅವರನ್ನು ಬಿಟ್ಟುಬಿಡಲಾಗಿದೆ. ಆಪರೇಷನ್ ಸಿಂಧೂರ್ ಬಗ್ಗೆ ಅವರ ಹೇಳಿಕೆಯನ್ನು ವಿರೋಽಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಪೋಸ್ಟ್ ಮಾಡಿದ್ದಾರೆ.

ಟ್ರಂಪ್ ಹೇಳಿದ್ದೇನು?
ಬುಧವಾರ ಓವಲ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತ ರಷ್ಯಾದ ಕಚ್ಚಾ ತೈಲವನ್ನು ಖರೀದಿಸುತ್ತಿರುವುದಕ್ಕೆ ಅಮೆರಿಕ ಸಂತೋಷವಾಗಿಲ್ಲ. ಈ ಖರೀದಿಯು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಯುದ್ಧಕ್ಕೆ ಹಣಕಾಸು ಒದಗಿಸಲು ಸಹಾಯ ಮಾಡಿದೆ. ನನ್ನ ಸ್ನೇಹಿತ, ನಮ್ಮ ನಡುವೆ ಉತ್ತಮ ಸಂಬಂಧವಿದೆ. ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ನನಗೆ ಭರವಸೆ ನೀಡಿದರು. ಅದು ಒಂದು ದೊಡ್ಡ ಹೆಜ್ಜೆ. ಈಗ ನಾವು ಚೀನಾವನ್ನು ಅದೇ ರೀತಿ ಮಾಡಬೇಕಾಗಿದೆ ಎಂದು ತಿಳಿಸಿದ್ದರು.

Tags:
error: Content is protected !!