Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್‌ ಸಂಚಾರ ತಾತ್ಕಾಲಿಕ ಸ್ಥಗಿತ

ಹಾಸನ: ಜಿಲ್ಲೆಯ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸಿದ್ದಾರೆ.

ವಾರಾಂತ್ಯ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹಾಸನಾಂಬೆ ದರ್ಶನಕ್ಕೆ ಜನರ ದಂಡೇ ಆಗಮಿಸುತ್ತಿದ್ದು, ಹಾಸನ ಜಿಲ್ಲಾಡಳಿತ ಶಿಷ್ಟಾಚಾರ ಪಾಲನೆಯಲ್ಲಿ ಮಾರ್ಪಾಡು ಮಾಡಿದೆ.

ಇದನ್ನು ಓದಿ: ಒಂದೇ ದಿನ 4 ಲಕ್ಷಕ್ಕೂ ಅಧಿಕ ಭಕ್ತರಿಂದ ಹಾಸನಾಂಬೆ ದೇವಿ ದರ್ಶನ

ಈ ನಡುವೆ ಬೆಂಗಳೂರು ಹಾಗೂ ಹಾಸನ ನಡುವೆ ಬಸ್‌ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜನರನ್ನು ನಿಯಂತ್ರಿಸಲು ಟಿಕೆಟ್‌ ಬುಕಿಂಗ್‌ ಕೂಡ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ.

ಹಾಸನಾಂಬೆ ದೇವಸ್ಥಾನ ಹಾಗೂ ಸುತ್ತಮುತ್ತ ಭಾರೀ ಸಂಖ್ಯೆಯಲ್ಲಿ ಜನರು ಬರುತ್ತಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ಈಗಾಗಲೇ ಹಾಸನಾಂಬೆ ದರ್ಶನ ಪಡೆಯಲೆಂದು 50 ಸಾವಿರ ಜನರು ಮುಂಗಡ ಟಿಕೆಟ್‌ ಕಾಯ್ದಿರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಬುಕಿಂಗ್‌ ಕೂಡ ಸದ್ಯಕ್ಕೆ ಬಂದ್‌ ಆಗಿದೆ.

Tags:
error: Content is protected !!