Mysore
32
few clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಓದುಗರ ಪತ್ರ: ಕಾಡಂಚಿನ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ

ಓದುಗರ ಪತ್ರ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಬಡಗಲಪುರ ಗ್ರಾಮದ ರೈತರೊಬ್ಬರ ಮೇಲೆ ಜಮೀನಿನಲ್ಲಿ ಹುಲಿ ದಾಳಿ ನಡೆಸಿರುವ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹುಲಿ ದಾಳಿಯಲ್ಲಿ ರೈತ ತನ್ನ ಎರಡೂ ಕಣ್ಣುಗಳನ್ನು ಕಳೆದುಕೊಂಡಿದ್ದು, ಅವರ ಜೀವನ ದುಸ್ತರವಾಗಿದೆ.

ಇತ್ತೀಚಿನ ದಿನಗಳಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, ರೈತರು ಕೃಷಿ ಚಟುವಟಿಕೆಗಳಿಗಾಗಿ ತಮ್ಮ ಜಮೀನುಗಳಿಗೆ ತೆರಳಲು ಭಯ ಪಡುತ್ತಿದ್ದಾರೆ. ಕಾಡು ಪ್ರಾಣಿಗಳಿಂದ ಬೆಳೆ ನಷ್ಟವಾದರೆ, ರೈತರ ಮೇಲೆ ಪ್ರಾಣಿಗಳು ದಾಳಿ ಮಾಡಿ ಜೀವ ಹಾನಿಯಾದರೆ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರವನ್ನೂ ನೀಡುವುದಿಲ್ಲ. ಅರಣ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಡಂಚಿನ ಗ್ರಾಮಗಳ ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವುದು ಅಗತ್ಯ.

-ಎನ್.ಪಿ. ಪರಶಿವಮೂರ್ತಿ, ನಂಜೀಪುರ, ಸರಗೂರು ತಾ

Tags:
error: Content is protected !!