ಎಚ್.ಡಿ.ಕೋಟೆ: ಜಾತಿ ಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಇಬ್ಬರು ಶಿಕ್ಷಕರು ಅಪಘಾತಕ್ಕೀಡಾದ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೂದನೂರು ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮೀಗೌಡ ಅವರಿಗೆ ಕಾಲು ಮುರಿತವಾಗಿದ್ದು, ಸಹ ಶಿಕ್ಷಕಿ ಮಧುಶ್ರೀಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗಾಯಾಳುಗಳಿಬ್ಬರನ್ನೂ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ವಾಮೀಗೌಡ ಅವರಿಗೆ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಎಚ್.ಡಿ.ಕೋಟೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಇಬ್ಬರೂ ಪಾರಾಗಿದ್ದಾರೆ.





