ಶಿವಮೊಗ್ಗ: ಬಿಹಾರ ವಿಧಾನಸಭೆ ಚುನಾವಣೆಗೆಂದು ಅಧಿಕಾರಿಗಳಿಂದ ಸಚಿವರು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರುಮ ಸಚಿವರ ವಸೂಲಿಗೆ ಅಧಿಕಾರಿಗಳು ಕಣ್ಣೀರು ಹಾಕಿಕೊಂಡು ನಮ್ಮ ಎದುರಿಗೆ ಹೇಳುತ್ತಿದ್ದಾರೆ. ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಎಂದು ಹಣ ಸಂಗ್ರಹ ಮಾಡುತ್ತಿದ್ದಾರೆ. ಈಗ ದಂಧೆ ಆಗಿದೆ. ಅದು ಬಿಹಾರಕ್ಕೂ ತಲುಪಲ್ಲ. ಅದು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಹೋಗುತ್ತದೆ. ಬಿಹಾರ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು ಕಳೆದ ಒಂದು ವಾರದಿಂದ ಆರ್‌ಎಸ್‌ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್ ಮೇಲೆ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್ ಆಸ್ತಿ ಪರಿಶೀಲನೆ ಮಾಡಿಸುವ ಕೆಲಸ ಮಾಡಲಾಗುತ್ತಿದೆ. ಇದು ಕಾಂಗ್ರೆಸ್‌ನ ಅಧಃಪತನಕ್ಕೆ ಕಾರಣವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.





