Mysore
23
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಹಬ್ಬದ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ

ಹಾಸನ: ನಾಡಿನಾದ್ಯಂತ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಮನೆಮಾಡಿದ್ದು, ಹಬ್ಬದ ದಿನವೂ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ.

ಇಂದು ಮುಂಜಾನೇ ಐದು ಗಂಟೆಯಿಂದಲೇ ದೇವಿಯ ದರ್ಶನ ಆರಂಭವಾಗಿದ್ದು, ತಾಯಿಯನ್ನು ನೋಡಲು ಜನರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

ಇದನ್ನು ಓದಿ: ಹಾಸನಾಂಬೆ ದರ್ಶನಕ್ಕೆ ಲಕ್ಷಾಂತರ ಭಕ್ತರು: ಕಾಲ್ತುಳಿತದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗೆ ಪತ್ರ ಬರೆದ ಎಸ್‌ಪಿ

ಇಂದು, ನಾಳೆ ಹಾಗೂ ನಾಡಿದ್ದು ಲಕ್ಷಾಂತರ ಮಂದಿ ಹಾಸನಾಂಬೆ ದೇವಿಯ ದರ್ಶನ ಪಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ದೇವಾಲಯಕ್ಕೆ ಲಕ್ಷಾಂತರ ಮಂದಿ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಸನಕ್ಕೆ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಸಹ ರದ್ದು ಮಾಡಲಾಗಿದೆ.

ಆದರೂ ಭಕ್ತರು ಕಾರುಗಳು ಸೇರಿದಂತೆ ಅನೇಕ ವಾಹನಗಳಲ್ಲಿ ದೇವಿಯ ದರ್ಶನಕ್ಕೆ ಆಗಮಿಸುತ್ತಿದ್ದು, ದೇವಿಯ ದರ್ಶನಕ್ಕೆ ಕೇವಲ ಮೂರು ದಿನ ಮಾತ್ರ ಬಾಕಿಯಿದೆ.

Tags:
error: Content is protected !!